Advertisement
ಘಟನೆಯಲ್ಲಿ ವಿದ್ಯಾರ್ಥಿನಿ ಸಾರಾ ಇರಾನ್ ಇಬ್ರಾಹಿಂ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾಳೆ. ಬಸ್ಸು ಬಿ.ಸಿ.ರೋಡು ಭಾಗದಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಬ್ಬುಕಟ್ಟೆ ಭಾಗಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಶಾಲಾ ಬಸ್ಸಿನ ಚಾಲಕ ಬೆಳ್ಮ ಗ್ರಾಮ ನಿವಾಸಿ ಮೊಹಮ್ಮದ್ ಸುಹೈಲ್ ವಿದ್ಯಾರ್ಥಿನಿಯನ್ನು ಹತ್ತಿಸಲು ಬ್ರಹ್ಮರಕೂಟ್ಲು ನಲ್ಲಿ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿದ್ದು, ಈ ವೇಳೆ ಚಾಲಕ ವೆಂಕಟೇಶ್ ಲಾರಿಯನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾನೆ.
Related Articles
Advertisement