Advertisement

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

05:24 PM Oct 25, 2024 | sudhir |

ಆನಂದಪುರ: ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆನಂದಪುರ ಸಮೀಪದ ಗೌತಮಪುರದಲ್ಲಿ ಶುಕ್ರವಾರ(ಅ.25) ಸಂಭವಿಸಿದೆ.

Advertisement

ತ್ಯಾಗರ್ತಿಯ ಬೆಳಂದೂರು ಗ್ರಾಮದ ವಾಸಪ್ಪ,(70) ಜಯನಗರದ ಸತೀಶ್(40) ಮೃತ ದುರ್ದೈವಿಗಳು.

ತ್ಯಾಗರ್ತಿ ಕಡೆಯಿಂದ ಆನಂದಪುರ ಕಡೆಗೆ ಬರುತ್ತಿದ್ದ ಬೈಕಿಗೆ ಆನಂದಪುರದಿಂದ ಶಿಕಾರಿಪುರ ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ

Advertisement
Advertisement

Udayavani is now on Telegram. Click here to join our channel and stay updated with the latest news.

Next