Advertisement

ಶಿರ್ವ : ರಸ್ತೆ ಬದಿ ನಿಂತಿದ್ದವರಿಗೆ ಬೈಕ್ ಢಿಕ್ಕಿ : ತಂದೆ ಸಾವು, ಮಗನಿಗೆ ಗಂಭೀರ ಗಾಯ

09:16 AM Sep 22, 2022 | Team Udayavani |

ಶಿರ್ವ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್‌ ಬಳಿ ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್‌ ಢಿಕ್ಕಿ ಹೊಡೆದು ತಂದೆ ಮೃತಪಟ್ಟು ಮಗ ಗಂಭೀರ ಗಾಯಗೊಂಡ ಘಟನೆ ಸೆ. 21ರಂದು ರಾತ್ರಿ ನಡೆದಿದೆ.

Advertisement

ಬಾಗಲಕೋಟೆ ಮೂಲದ ಶರಣಪ್ಪ ಬಾಲಪ್ಪ ಗಂಜಿಹಾಳ(40) ಮೃತಪಟ್ಟವರು. ಶ್ರವಣ ಕುಮಾರ(6) ಗಾಯಗೊಂಡವರು. ಶರಣಪ್ಪ ತನ್ನ ಪುತ್ರ ಶ್ರವಣಕುಮಾರನೊಂದಿಗೆ ಬುಧವಾರ ರಾತ್ರಿ 7 ಗಂಟೆ ಸುಮಾರಿಗೆ ದಿನಸಿ ತರಲು ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್‌ನ ಎದುರುಗಡೆ ರಸ್ತೆ ಬದಿಯಲ್ಲಿ ನಿಂತಿರುವಾಗ ಶಂಕರಪುರ ಕಡೆಯಿಂದ ವೇಗವಾಗಿ ಬಂದ ಬೈಕ್‌ ಸವಾರ ಢಿಕ್ಕಿ ಹೊಡೆದು ಬೈಕನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.

ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಇಬ್ಬರನ್ನೂ ಸಾರ್ವಜನಿಕರು ಸೇರಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತಲೆಗೆ ಗಂಭೀರ ಗಾಯಗೊಂಡು ಒಳರೋಗಿಯಾಗಿ ಚಿಕಿತ್ಸೆಗೆ ದಾಖಲಾದ ಶರಣಪ್ಪ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಶ್ರವಣ ಕುಮಾರ ಒಳರೋಗಿಯಾಗಿ ದಾಖಲಾಗಿದ್ದು, ತುರ್ತುಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೆಂಗಳೂರು-ಮೈಸೂರು-ಮಂಗಳೂರು ರೈಲು ಕುಂದಾಪುರ-ಕಾರವಾರದ ವರೆಗೆ ವಿಸ್ತರಣೆಗೆ ಹೆಚ್ಚಿದ ಬೇಡಿಕೆ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next