Advertisement

Chamarajanagar: ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ವಾಹನ ಪಲ್ಟಿ… 20 ಮಹಿಳೆಯರಿಗೆ ಗಾಯ

11:48 AM Jul 30, 2024 | Team Udayavani |

ಚಾಮರಾಜನಗರ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 20 ಮಹಿಳೆಯರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಳ್ಳಿ ಗ್ರಾಮದ ಬಳಿ ಸಂಭವಿಸಿದೆ.

Advertisement

ಮಂಗಳವಾರ ಬೆಳಿಗ್ಗೆ ತಾಲ್ಲೂಕಿನ ಅಮಚವಾಡಿ ಗ್ರಾಮದಿಂದ ನಿಜಲಿಂಗನಪುರಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಪರಿಣಾಮ ವಾಹನದಲ್ಲಿದ್ದ ಸುಮಾರು ಇಪ್ಪತ್ತು ಮಹಿಳೆಯರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಗಾಯಾಳುಗಳನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Bengaluru: ಹೊರ ರಾಜ್ಯದಿಂದ ಮಾಂಸ ಸಾಗಣೆ; ವ್ಯಾಪಾರಿಗಳಿಗೆ ಪೊಲೀಸ್‌ ನೋಟಿಸ್‌

Advertisement

Udayavani is now on Telegram. Click here to join our channel and stay updated with the latest news.

Next