Advertisement

Charmadi Ghat: ದಟ್ಟ ಮಂಜು: ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ…

08:40 AM Sep 16, 2023 | Team Udayavani |

ಕೊಟ್ಟಿಗೆಹಾರ: ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತಿದ್ದ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು ಪರಿಣಾಮ ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.

Advertisement

ಶುಕ್ರವಾರ ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ತುಂಬಿದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಆವರಿಸಿದ ದಟ್ಟ ಮಂಜಿನಿಂದ ದಾರಿ ಕಾಣದೆ 100 ಅಡಿ ಪ್ರಪಾತಕ್ಕೆ ಬಿದ್ದಿದೆ ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಯಾವುದೇ ಪ್ರಾಣಪಾಯವಿಲ್ಲದೆ ಪಾರಾಗಿದ್ದಾರೆ.

ಇಬ್ಬರ ಪ್ರಾಣ ಉಳಿಸಿದ ಮರ:
ಲಾರಿ ತಡೆಗೋಡೆಗೆ ಡಿಕ್ಕಿ ಹೊಡೆದು ನೂರು ಅಡಿ ಪ್ರಪಾತಕ್ಕೆ ಉರುಳಿದೆ ಈ ವೇಳೆ ಅಲ್ಲಿ ಇದ್ದ ದೈತ್ಯ ಮರಕ್ಕೆ ಲಾರಿ ಸಿಲುಕಿಕೊಂಡ ಪರಿಣಾಮ ಸಂಭವನೀಯ ಅವಘಡ ತಪ್ಪಿದೆ ಒಂದು ವೇಳೆ ಲಾರಿ ಮರಕ್ಕೆ ಸಿಕ್ಕಿಕೊಳ್ಳದಿದ್ದಲ್ಲಿ ಸಾವಿರ ಅಡಿ ಪ್ರಪಾತಕ್ಕೆ ಹೋಗಿ ಬೀಳುತ್ತಿತ್ತು ಎನ್ನಲಾಗಿದೆ.

ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ: Daily Horoscope: ದಿಟ್ಟ ನಿರ್ಧಾರ ಕೈಗೊಂಡು ಮುನ್ನಡೆದರೆ ಯಶಸ್ಸು ಖಂಡಿತ

Advertisement

Udayavani is now on Telegram. Click here to join our channel and stay updated with the latest news.

Next