Advertisement

Chikkamagaluru: ಕಾರು ಡಿಕ್ಕಿ ಹೊಡೆದು ಸ್ಕೂಟಿ ಸವಾರನಿಗೆ ಗಂಭೀರ ಗಾಯ

05:04 PM Apr 25, 2023 | Team Udayavani |

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 73 ರ ಚಕ್ ಮಕ್ಕಿ ಯಲ್ಲಿ ಮಂಗಳವಾರ ನಡೆದಿದೆ.

Advertisement

ಫಲ್ಗುಣಿ ಮೂಲದ ಸ್ಕೂಟಿ ಸವಾರ ಬೊಮ್ಮಯ್ಯ ಗಂಭೀರ ಗಾಯಗೊಂಡಿದ್ದು ಕೂಡಲೇ ಸಾರ್ವಜನಿಕರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಧರ್ಮಸ್ಥಳದಿಂದ ಆಂಧ್ರ ಪ್ರದೇಶಕ್ಕೆ ಹೋಗುತ್ತಿದ್ದ ಕಾರು ಹಾಗೂ ಫಲ್ಗುಣಿ ಕಡೆಯಿಂದ ಚಕ್ ಮಕ್ಕಿ ಕಡೆಗೆ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Operation Kaveri: ಸುಡಾನ್​​ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಆರಂಭ

Advertisement
Advertisement

Udayavani is now on Telegram. Click here to join our channel and stay updated with the latest news.

Next