Advertisement

ಸಿಮೆಂಟ್ ಲಾರಿ –ಜೀಪು ನಡುವೆ ಭೀಕರ ಅಪಘಾತ : ಏಳು ಮಂದಿ ಸಾವು, ನಾಲ್ವರ ಸ್ಥಿತಿ ಗಂಭೀರ

04:33 PM Sep 12, 2021 | Team Udayavani |

ಚಿಂತಾಮಣಿ : ಲಾರಿ ಹಾಗೂ ಜೀಪು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯ ಮರಿ ನಾಯಕನ ಹಳ್ಳಿ ಬಳಿ‌ ರವಿವಾರ ಸಂಭವಿಸಿದೆ.

Advertisement

ಚಿಂತಾಮಣಿ ತಾಡಿಗೊಲ್ ಗೌನಿಪಲ್ಲಿ ಕಡೆಗೆ ಜೀಪಿನಲ್ಲಿ ಪ್ರಯಾಣಿಕರನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಅಪಘಾತದದ ರಭಸಕ್ಕೆ ಜೀಪು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಜೀಪ್ ನಲ್ಲಿ 11 ಮಂದಿ ಪ್ರಯಾಣಿಸುತ್ತಿದ್ದು ಈ ಪೈಕಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತಪಟ್ಟವರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಇದನ್ನೂ ಓದಿ :Breaking news :  ಭೂಪೇಂದ್ರ ಪಟೇಲ್ ಗುಜರಾತ್ ನೂತನ ಸಿಎಂ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next