Advertisement

Chitradurda: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಮೃತ್ಯು, ಮೂವರು ಗಂಭೀರ

09:58 AM Sep 04, 2023 | Team Udayavani |

ಚಿತ್ರದುರ್ಗ: ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ಮಲ್ಲಾಪುರ ಬಳಿಯ NH-150 ಹೈವೆಯಲ್ಲಿ ನಡೆದಿದೆ.

Advertisement

ಮೃತರನ್ನು ಶಂಶುದ್ದೀನ್, (40), ಮಲ್ಲಿಕಾ(37), ಕಲೀಲ್(42), ತಬ್ರೇಜ್ (13) ಮೃತರು.

ಕಾರಿನಲ್ಲಿದ್ದ ನರ್ಗಿಶ್, ರೆಹನ್, ರಹಮಾನ್ ಮೂವರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸಪೇಟೆಯಿಂದ ತುಮಕೂರಿಗೆ ತೆರಳುತ್ತಿದ್ದ ಕಾರು ಚಿತ್ರದುರ್ಗ ಮಲ್ಲಾಪುರ ಬಳಿ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಇದನ್ನೂ ಓದಿ: Pejawar seer: ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವರ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

Advertisement

Udayavani is now on Telegram. Click here to join our channel and stay updated with the latest news.

Next