Advertisement

ಸಿಟಿ ಮಾರ್ಕೆಟ್ ಮೇಲ್ಸೇತುವೆಯಲ್ಲಿ ಅಪಘಾತ : ಟೌನ್ ಹಾಲ್ ಸುತ್ತಮುತ್ತ ಸಂಚಾರ ದಟ್ಟಣೆ

07:56 PM Apr 05, 2022 | Team Udayavani |

ಬೆಂಗಳೂರು : ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಸಿಟಿ ಮಾರ್ಕೆಟ್ ಮೇಲ್ಸೇತುವೆಯಲ್ಲಿ ನಡೆದಿದೆ. ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾದ ಎರ್ಟಿಗಾ ಕಾರು ಮತ್ತೊಂದು ಬದಿಯಿಂದ ಬರುತ್ತಿದ್ದ ಸ್ವಿಫ್ಟ್ ಡಿಜೈರ್ ಕಾರಿಗೆ ಢಿಕ್ಕಿಯಾಗಿದೆ.

Advertisement

ಪರಿಣಾಮ ಕಾರಿನಲ್ಲಿದ್ದ ಕೆಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದಾಗಿ ಕಾರ್ಪೋರೇಷನ್ ಸರ್ಕಲ್, ಟೌನ್ ಹಾಲ್ , ಕೆ.ಆರ್ ಸರ್ಕಲ್ ಸೇರಿದಂತೆ ಹಲವೆಡೆ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಹಲಸೂರು ಗೇಟ್ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ನೂತನ ಯುವ ನೀತಿಯಲ್ಲಿ ಯುವ ವಿಕಾಸ ಇರಬೇಕು: ಸಚಿವ ಡಾ.ನಾರಾಯಣಗೌಡ

Advertisement
Advertisement

Udayavani is now on Telegram. Click here to join our channel and stay updated with the latest news.

Next