ದೋಟಿಹಾಳ: ಕುಷ್ಟಗಿ ತಾಲೂಕಿನ ಗುಡಿ ಕಲಕೇರಿ ಸಾಮಾಜಿಕ ಅರಣ್ಯ ವಲಯದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಕಾರು ಹಾಗೂ ಲಾರಿಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
Advertisement
ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ ಕಾಂಬಳೆ, ಅಕ್ಷಯ, ಶಿವಶರಣ, ಜಯಶ್ರೀ ಹಾಗೂ ಮಕ್ಕಳಾದ ರಾಕಿ, ರಶ್ಮಿಕಾ ಎನ್ನಲಾಗಿದೆ.
ಕಾರು ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು ಎನ್ನಲಾಗಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಲಾರಿಯ ಅಡಿಭಾಗದಲ್ಲಿ ಸಿಕ್ಕಿಕೊಂಡಿದ್ದು ಸ್ಥಳೀಯರು ಹಾಗೂ ಪೊಲೀಸರು ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡುತ್ತಿದ್ದಾರೆ.
Related Articles
Advertisement