Advertisement

ಸಾರಿಗೆ ಬಸ್ –ಕಾರು ನಡುವೆ ಭೀಕರ ಅಪಘಾತ : ಓರ್ವ ಸಾವು, ಮಹಿಳೆಗೆ ಗಂಭೀರ ಗಾಯ

07:32 PM Apr 23, 2021 | Team Udayavani |

ಗದಗ: ತಾಲೂಕಿನ ನಾರಾಯಣಪುರ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

Advertisement

ಗಜೇಂದ್ರಗಡ ಪಟ್ಟಣದ ನಿವಾಸಿ ಕಳಕಪ್ಪ ಕೊಟಗಿ (45) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಜೊತೆಗಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದಾರೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಆದರೆ, ಬಸ್‌ನಲ್ಲಿದ್ದವರ ಪೈಕಿ ಕೆಲವರಿಗೆ ತರಚಿದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಗದಗ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ :ಬೆಳ್ತಂಗಡಿ ಬಾಲಕನ ಅಪಹರಣ ಪ್ರಕರಣ: ಆರೋಪಿಗಳಿಬ್ಬರಿಗೆ ಜಾಮೀನು ಮಂಜೂರು

Advertisement
Advertisement

Udayavani is now on Telegram. Click here to join our channel and stay updated with the latest news.

Next