Advertisement

ಗೋವಾದ ಮೋಲೆಮ್ ನಲ್ಲಿ ಇನ್ನೋವಾ ಕಾರು, ಬಸ್ಸು ಮುಖಾಮುಖಿ: ಆರು ಮಂದಿಗೆ ಗಾಯ

05:37 PM Feb 14, 2023 | Team Udayavani |

ಪಣಜಿ: ಗೋವಾದ ಮೋಲೆಮ್ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ನಂ.4ರಲ್ಲಿ ಖಾಸಗಿ ಬಸ್ ಮತ್ತು ಇನ್ನೋವಾ ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಮಂದಿ ಗಾಯಗೊಂಡ ಘಟನೆ ನಡೆದಿದೆ.

Advertisement

ಅಪಘಾತದಲ್ಲಿ ಇನ್ನೋವಾ ಕಾರಿನ ಚಾಲಕ ಗಾಯಗೊಂಡಿದ್ದಾರೆ. ಆತನ ಕಾಲಿಗೆ ಬಲವಾದ ಪೆಟ್ಟು ಬಿದ್ದಿದೆ. ಇನೋವಾದಲ್ಲಿದ್ದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ತಿಸ್ಕನಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ, ಅವರಲ್ಲಿ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಆಸ್ಪತ್ರೆಗೆ ಕರೆತರಲಾಗಿದೆ. ಮೂವರನ್ನು ಫೋಂಡಾ ಉಪ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದ ರಸ್ತೆಯಲ್ಲಿ ಕೆಲ ಹೊತ್ತು ಸಂಚಾರ ವ್ಯತ್ಯಯ ಉಂಟಾಯಿತು.

ಖಾಸಗಿ ಬಸ್ ಬೆಂಗಳೂರಿನಿಂದ ಗೋವಾಕ್ಕೆ ಬರುತ್ತಿತ್ತು. ಈ ವೇಳೆ ಎದುರಿನಿಂದ ಬರುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಎರಡೂ ವಾಹನಗಳೂ ಜಖಂಗೊಂಡಿದ್ದು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next