Advertisement

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

09:56 PM Jul 17, 2024 | Team Udayavani |

ಹಾವೇರಿ: ರೋಡ್ ಕ್ರಾಸ್ ಮಾಡುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಗರದ ವಾಲ್ಮೀಕಿ ವೃತ್ತದಲ್ಲಿ ಬುಧವಾರ ರಾತ್ರಿ ನಡೆದಿದೆ.

Advertisement

ಇಜಾರಿಲಕ್ಮಾಪುರದ ಲಕ್ಷ್ಮಿ ಕುಳನೂರು (38) ಮೃತಪಟ್ಟಿರುವ ಮಹಿಳೆ.

ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಅಡುಗೆ ಕೆಲಸ ಮಾಡುತ್ತಿದ್ದ ಮಹಿಳೆ ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ಇಜಾರಿಲಕ್ಮಾಪುರದ ಜನರು, ಸಾರ್ವಜನಿಕರು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next