ಕೊರಟಗೆರೆ: ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಪತಿ ಸ್ಥಳದಲ್ಲಿಯೇ ಮೃತಪಟ್ಟರೆ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಕೊರಟಗೆರೆ ಕೋಡಗದಾಲ ರಸ್ತೆಯ ಯಾದಗೆರೆ ಬಳಿ ಬುಧವಾರ ಸಂಜೆ ನಡೆದಿದೆ.
ತಾಲ್ಲೂಕಿನ ಹರಿಹರಪ್ಪನಪಾಳ್ಯದ ವಾಸಿಯಾದ ಬೈಕ್ ಸವಾರ ವೆಂಕಟಾಚಲ (52 ವರ್ಷ) ಮೃತಪಟ್ಟ ದುರ್ದೈವಿ. ಈತನ ಪತ್ನಿ ನಾಗಲಕ್ಷ್ಮೀ (32 ವರ್ಷ) ಎಡಗಣ್ಣು ಮತ್ತು ಎರಡು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಕ್ಯಾಂಟರ್ ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಲಿದ್ದು ಅಪಘಾತ ನಡೆದ ಬಳಿಕ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಪಿಐ ಸುರೇಶ್ ಪಿಎಸ್ಐ ಪ್ರದೀಪ್ ಸಿಂಗ್ ಎಎಸ್ಐ ಮಂಜುನಾಥ್ ಮುಖ್ಯಪೇದೆ ಸಂಜೀವ್, ಜಯಪ್ರಕಾಶ್, ರಂಗರಾಜು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Related Articles
ಇದನ್ನೂ ಓದಿ: ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ; ಮನವಿ ನಿರಾಕರಿಸಿದ Supreme Court