Advertisement

ತಮಿಳುನಾಡಿನ ಕೃಷ್ಣಗಿರಿಯಲ್ಲಿ ಭೀಕರ ರಸ್ತೆ ಅಪಘಾತ: 3 ತಿಂಗಳ ಮಗು ಸೇರಿ 5 ಮಂದಿ ಸಾವು

06:01 PM Feb 23, 2023 | Team Udayavani |

ಚೆನ್ನೈ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಹಸುಳೆ ಸೇರಿದಂತೆ ಐವರು ಸಾವನ್ನಪ್ಪಿ ಏಳು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

Advertisement

ಬೆಂಗಳೂರಿಗೆ ತೆರಳುತ್ತಿದ್ದ ಪ್ಯಾಸೆಂಜರ್ ಬಸ್ಸಿಗೆ ಆಂಧ್ರಪ್ರದೇಶದ ದೇವಕೋಟಕ್ಕೆ ಕೃಷಿ ಕೆಲಸಕ್ಕಾಗಿ 12 ಮಂದಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಗಾಯಗೊಂಡವರಲ್ಲಿ ಕೆಲವರನ್ನು ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರರು ಕಾವೇರಿಪಟ್ಟಣ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ: ಸುಕೇಶ್ ಜೈಲು ಕೋಣೆಗೆ ದಾಳಿ: 1.5 ಲಕ್ಷ ಮೌಲ್ಯದ ಚಪ್ಪಲಿ, 80 ಸಾವಿರ ಮೌಲ್ಯದ ಜೀನ್ಸ್ ವಶಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next