ಕುಣಿಗಲ್ : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಪೊಲೀಸರು ಗಾಯಗೊಂಡಿರುವ ಘಟನೆ ತಾಲೂಕಿನ ಎಡಿಯೂರು ಹೋಬಳಿ ರಾಷ್ಟ್ರೀಯ ಹೆದ್ದಾರಿ 75 ತಿಪ್ಪೂರು ಗೇಟ್ ಬಳಿ ಸಂಭವಿಸಿದೆ.
ಕುಮಾರಸ್ವಾಮಿ ಬೆಂಗಾವಲು ಪೊಲೀಸ್ ಸಿಬ್ಬಂದಿಗಳಾದ ಮಹೇಶ್ , ಮಂಜುನಾಥ್ ತೀವ್ರ ವಾಗಿ ಗಾಯಗೊಂಡಿದ್ದು ಜಗದೀಶ್, ಆನಂದ್, ಹರೀಶ್ ಗೆ ಸಣ್ಣ ಪುಟ್ಟ ಗಾಯವಾಗಿದೆ.
ಘಟನೆ ವಿವರ : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಮೃತ ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಸುರತ್ಕಲ್‌ನ ಪಾಝಿಲ್ ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿ ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದರು ಇವರ ಬೆಂಗಾವಲು ಪೊಲೀಸರು ಭದ್ರತೆ ಮುಗಿಸಿಕೊಂಡು ಕಾರಿನಲ್ಲಿ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿರಬೇಕಾದರೆ ತಾಲೂಕಿನ ತಿಪ್ಪೂರು ಗೇಟ್ ಬಳಿ ಈ ಅವಘಡ ಸಂಬವಿಸಿದೆ.
ಅಮೃತೂರು ವೃತ್ತ ನಿರೀಕ್ಷಕ ಅರುಣ್ ಸಾಲಂಕೆ, ಪಿಎಸ್ ಐ ಮಂಗಳಗೌರಮ್ಮ ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ, ಅಮೃತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇದನ್ನೂ ಓದಿ : ಗಂಗಾವತಿ: ಗಾಳಿ-ಮಳೆ; ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತ