Advertisement

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

09:13 PM May 29, 2023 | Team Udayavani |

ಮೈಸೂರು: ತಿ. ನರಸೀಪುರ ತಾಲ್ಲೂಕಿನ ಕುರುಬೂರು ಬಳಿ ಭೀಕರ ರಸ್ತೆ ಅಪಘಾತ ಸಂಬಂಧ ಇಂದು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ ಎಚ್ .ಸಿ.ಮಹಾದೇವಪ್ಪ ಅವರು ಇಂದು ಮೈಸೂರು ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಈ‌ ಘಟನೆ ದುರದೃಷ್ಟಕರವಾದದ್ದು, ಹತ್ತು ಮಂದಿ ಮೃತಪಟ್ಟಿರುವುದು ಮನಸ್ಸಿಗೆ ನೋವಾಗಿದೆ.

ಈಗಾಗಲೇ ಸರ್ಕಾರ ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ ಸಚಿವರು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹಾಗೂ ಅಧಿಕಾರಿಗಳು ಉಪಸ್ಧಿತರಿದ್ದರು.

ಇದನ್ನೂ ಓದಿ: 2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

Advertisement
Advertisement

Udayavani is now on Telegram. Click here to join our channel and stay updated with the latest news.

Next