ಮಂಗಳೂರು: ಕಾರು ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕೊಟ್ಟಾರ ಚೌಕಿ ಸಮೀಪದ ಕೋಡಿಕಲ್ ಕ್ರಾಸ್ ಬಳಿ ಸಂಭವಿಸಿದೆ.
Advertisement
ಮಹಾವೀರ್ ಸಿಂಗ್ ಮೃತಪಟ್ಟವರು. ಅವರು ಬೈಕ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮಹಾವೀರ್ ಸಿಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮಾರ್ಗ ಮಧ್ಯೆಯೇ ಮೃತಪಟ್ಟರು. ಕಾರು ಚಾಲಕ ಅಮಲು ಪದಾರ್ಥ ಸೇವನೆ ಮಾಡಿದ್ದನೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.