Advertisement
ಭದ್ರಾವತಿ ಮೂಲದ ಉಲ್ಲಾಸ್ ಆರ್. (21)ಅವರಿಗೆ ಎ. 22ರಂದು ಅಪರಾಹ್ನ ಭದ್ರಾವತಿ ತಾಲೂಕಿನ ಚೆನ್ನಗಿರಿ ರಸ್ತೆಯಲ್ಲಿ ಅಪಘಾತವಾಗಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಎ. 23ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ಬಳಿಕ ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಿದರು.
ಶ್ವಾಸಕೋಶಗಳನ್ನು ಚೆನ್ನೈಯ ಅಪೊಲೊ ಆಸ್ಪತ್ರೆಗೆ, ಯಕೃತ್ ಅನ್ನು ಅಸ್ಟರ್ ಬೆಂಗಳೂರಿನ ಸಿಎಂಐ ಆಸ್ಪತ್ರೆಗೆ, ಮೂತ್ರಪಿಂಡವನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ಮತ್ತು ಕಾರ್ನಿಯಾಗಳು ಹಾಗೂ ಮೂತ್ರಪಿಂಡವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು.
Related Articles
ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದ.ಕ. ಪೊಲೀಸ್ ಇಲಾಖೆಯ ನೆರವಿನೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.
Advertisement
ಅಂಗದಾನ ಪುಣ್ಯದ ಕೆಲಸ. ನನ್ನ ಮಗ ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕ್ಯ ಕಂಡಿದ್ದಾನೆ.– ರಾಜಪ್ಪ, ದಾನಿಯ ತಂದೆ ಉಲ್ಲಾಸ್ ಅವರ ಕುಟುಂಬದ ಈ ಉದಾತ್ತ ನಿರ್ಧಾರವು ಜನರ ಬದಲಾಗುತ್ತಿರುವ ಮನಸ್ಥಿತಿ ಯನ್ನು ತೋರಿಸುತ್ತದೆ. ಇದು ಸ್ವಾಗತಾರ್ಹ ಬದಲಾವಣೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಇಂತಹ ನಿರ್ಧಾರ ತೆಗೆದುಕೊಳ್ಳುತ್ತಿ¨ªಾರೆ. ಇದನ್ನು ಇನ್ನಷ್ಟು ಜನರು ಅನುಕರಿಸುವ ಅಗತ್ಯವಿದೆ.
-ಡಾ| ಅವಿನಾಶ ಶೆಟ್ಟಿ ವೈದ್ಯಕೀಯ ಅಧೀಕ್ಷಕರು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ