Advertisement

Road Mishap: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಮಹಿಳೆಗೆ ಗಂಭೀರ ಗಾಯ

12:51 PM Sep 23, 2023 | Team Udayavani |

ಮೂಡಲಗಿ : ಬೈಕಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು ಇನ್ನೋರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದ ಬಳಿ ಶುಕ್ರವಾರ ರಾತ್ರಿ 10 ಗಂಟೆಯ ಸಂಭವಿಸಿದೆ.

Advertisement

ಮೃತ ವ್ಯಕ್ತಿಯನ್ನು ರಾಯಭಾಗ ತಾಲೂಕಿನ ದೇವಪ್ಪರಟ್ಟಿ ಗ್ರಾಮದ ಲಕ್ಕಪ್ಪಾ ಕಲ್ಲಪ್ಪ ನಾಯಿಕ (44) ಎಂದು ತಿಳಿದು ಬಂದಿದೆ.

ಶುಕ್ರವಾರ ರಾತ್ರಿ ರಾಜ್ಯ ಹೆದ್ದಾರಿ ಮುಧೋಳ-ನಿಪ್ಪಾಣಿ ರಸ್ತೆಯಲ್ಲಿ ಗುರ್ಲಾಪೂರದಿಂದ ಹಳ್ಳೂರ ಕಡೆ ಹೋಗುತ್ತಿದ್ದ ಬಸ್ ವಿರುದ್ಧ ದಿಕ್ಕಿನಿಂದ ಬಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಬೈಕ್ ನಲ್ಲಿ ದಂಪತಿಗಳು ಹೋಗುತ್ತಿದ್ದು, ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತಕ್ಷಣ ಆಸ್ಪತ್ರೆಗೆ ರವಾನಿಸಲಾಯಿತಾದರೂ ದುರಾದೃಷ್ಟವಶಾತ ಬೈಕ್ ಸವಾರ ಮೃತರಾಗಿದ್ದಾರೆ. ಗಂಭೀರ ಗಾಯಗೊಂಡ ಮಹಿಳೆಗೆ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ: Cauvery Issue; ಸುಪ್ರೀಂ ಆದೇಶ ವಿರೋಧಿಸಿ ಮಂಡ್ಯ ಬಂದ್; ವ್ಯಾಪಕ ಬೆಂಬಲ

Advertisement

Udayavani is now on Telegram. Click here to join our channel and stay updated with the latest news.

Next