Advertisement

ಮದುವೆ ಸಮಾರಂಭಕ್ಕೆ ಹೊರಟಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ: ಮಗು ಸೇರಿ 8 ಮಂದಿ ಮೃತ್ಯು

08:11 PM May 07, 2023 | Team Udayavani |

ಉತ್ತರ ಪ್ರದೇಶ: ಮದುವೆ ಸಮಾರಂಭಕ್ಕೆ ಪಿಕ್ ಅಪ್ ವಾಹನದಲ್ಲಿ ತೆರಳುತ್ತಿದ್ದ ವೇಳೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಪಿಕ್ ಅಪ್ ವಾಹನದಲ್ಲಿದ್ದ ಪುಟ್ಟ ಮಗು ಸೇರಿ ಎಂಟು ಮಂದಿ ಮೃತಪಟ್ಟು ಹನ್ನೆರಡಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನ ದಲ್ಪತ್‌ಪುರ-ಕಾಶಿಪುರ್ ಹೆದ್ದಾರಿಯಲ್ಲಿ ರವಿವಾರ ಸಂಭವಿಸಿದೆ.

Advertisement

ಭಗತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದಲ್ಪತ್‌ಪುರ ರಸ್ತೆಯಲ್ಲಿರುವ ಖೈರ್‌ಖಾತಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧೀಕ್ಷಕ ಹೇಮರಾಜ್ ಮೀನಾ, ಪಿಕಪ್ ವಾಹನದಲ್ಲಿ ಸುಮಾರು ಇಪ್ಪತ್ತಾರಕ್ಕೂ ಹೆಚ್ಚು ಮಂದಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದಿದೆ ಪರಿಣಾಮ ಒಂದು ಮಗು ಸೇರಿ ಎಂಟು ಜನರು ಮೃತಪಟ್ಟಿದ್ದಾರೆ ಮತ್ತು ಸುಮಾರು 15 ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲು ಆದೇಶಿಸಿದ್ದಾರೆ.

ಭಗತ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಟ್ರಕ್ ಚಾಲಕನನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

ಇದನ್ನೂ ಓದಿ: ದಸರಾ ಜಂಬೂ ಸವಾರಿಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ

Advertisement

Udayavani is now on Telegram. Click here to join our channel and stay updated with the latest news.

Next