Advertisement

Road Mishap: ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ… ಬಾಣಸಿಗ ಮೃತ್ಯು

10:31 AM Oct 18, 2023 | Team Udayavani |

ಮಣಿಪಾಲ; ಪರ್ಕಳ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಾಜಕದ ಬಳಿ ಬೈಕ್ ಅಪಘಾತ ಸಂಭವಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ.

Advertisement

ಮೃತ ಯುವಕನನ್ನು ಹಿರಿಯಡ್ಕದ ನಿವಾಸಿ ಅಕ್ಷಯ ಭಟ್ (26ವ) ಎಂದು ತಿಳಿದುಬಂದಿದೆ.

ಯುವಕ ಅವಿವಾಹಿತನಾಗಿದ್ದು, ಅಡುಗೆ ವೃತ್ತಿ ಮಾಡಿಕೊಂಡಿದ್ದರು ಎನ್ನಲಾಗಿದ್ದು. ಇಂದ್ರಾಳಿಯ ದೇವಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆ ಅಡುಗೆ ಕೆಲಸ ನಿರ್ವಹಿಸಲು ಮನೆಯಿಂದ ಬರುವ ಸಂದರ್ಭ ಈ ದುರ್ಘಟನೆ ನಡೆದಿದೆ.

ಮಣಿಪಾಲ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ತೆರಳಿ ಕಾನೂನು ಪ್ರಕ್ರಿಯೆ ನಡೆಸಿ ಶವವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ: Operation Ajay: 286 ಭಾರತೀಯರೊಂದಿಗೆ ಐದನೇ ವಿಮಾನ ಇಸ್ರೇಲ್‌ನಿಂದ ಆಗಮನ

Advertisement

Udayavani is now on Telegram. Click here to join our channel and stay updated with the latest news.

Next