Advertisement
ಬಸ್ ಚಾಲಕ ಮಣಿಪಾಲದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಸ್ಸಿನಲ್ಲಿ 50ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ. ಬಸ್ ಚಾಲಕ ಕೂಡಲೇ ನಿಲ್ಲಿಸಿದ ಪರಿಣಾಮ ದೊಡ್ಡ ಅವಘಡವೊಂದು ತಪ್ಪಿದೆ. ಘಟನೆಯಿಂದಾಗಿ ಮಕ್ಕಳು ಕೆಲವು ಕಾಲ ಭಯಭೀತರಾಗಿದ್ದರು. ಕೂಡಲೇ ಬಸ್‌ನಲ್ಲಿದ್ದ ಸಹಾಯಕರು ಶಾಲೆಯ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ನೀಡಿದರು.
Related Articles
Advertisement
ಅನುಭವಿ ಚಾಲಕಬಸ್ ಚಾಲಕ 4 ವರ್ಷಗಳಿಂದ ಸಂಸ್ಥೆಯ ಶಾಲಾ ಬಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದರು. ಸರಳ ಸಜ್ಜನ ವ್ಯಕ್ತಿಯಾಗಿದ್ದು, ಇದುವರೆಗೆ ಇಂತಹ ಯಾವುದೇ ಘಟನೆಗಳು ನಡೆದಿರಲಿಲ್ಲ. ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಶಾಲೆಯ ಮೂಲಗಳು “ಉದಯವಾಣಿ’ಗೆ ತಿಳಿಸಿವೆ. ಮಣಿಪಾಲ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ ಚಾಲಕರಿಗೆ ಬೇಕಿದೆ ಆರೋಗ್ಯ ತಪಾಸಣೆ
ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದ್ದು, ಚಾಲಕರಲ್ಲಿಯೂ ಈ ಸಮಸ್ಯೆ ಕಂಡುಬರುತ್ತಿದೆ. ಶಾಲಾ ವಾಹನ ಚಾಲಕರನ್ನು ಸಂಸ್ಥೆಯ ವತಿಯಿಂದ ಕಡ್ಡಾಯವಾಗಿ ಕನಿಷ್ಠ 6 ತಿಂಗಳಿಗೊಮ್ಮೆಯಾದರೂ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ಹಿರಿಯ ಚಾಲಕರು ಅನುಭವಿಗಳಾದರೂ ಅನಾರೋಗ್ಯ ಸಮಸ್ಯೆಗಳೂ ಉಂಟಾಗುವ ಸಾಧ್ಯತೆಗಳಿರುತ್ತವೆ ಈ ಬಗ್ಗೆ ಶಾಲಾಡಳಿತ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.