Advertisement

Road Mishap: ಖಾಸಗಿ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ… ಓರ್ವ ಪ್ರಯಾಣಿಕ ಸಿಲುಕಿರುವ ಶಂಕೆ

10:51 PM Jun 02, 2024 | Team Udayavani |

ಯಾದಗಿರಿ : ಶಹಾಪುರಃ ತಾಲೂಕಿನ ಹತ್ತಿಗೂಡೂರ ಬಳಿ ಸುರಪುರ ರಸ್ತೆಯ ಸೇತುವೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

Advertisement

ತಕ್ಷಣ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಬಸ್ ಹಿಂಬದಿಯ ಗ್ಲಾಸ್ ಹೊಡೆದು ಜನರನ್ನು ರಕ್ಷಣೆ ಮಾಡಿದ್ದಾರೆ. ಹಲವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗೆಂದು ಸಮಿಪದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಬಸ್ ಬಿದ್ದು ಅರ್ಧಗಂಟೆಯಾದರೂ ಸ್ಥಳಕ್ಕೆ ಬಾರದ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಸ್ ನಡಿ ಇನ್ನೂ ಪ್ರಯಾಣಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಜನರು ಮಾಹಿತಿ ನೀಡಿದ್ದಾರೆ. ಮಳೆ ಸುರಿಯುತ್ತಿರುವ ಕರಣ ರಕ್ಷಣಾ ಕಾರ್ಯಾಚರಣೆಗೆ ತೊಡಕು ಉಂಟಾಗಿದೆ ಅಲ್ಲದೆ ಗಾಯಗೊಂಡ ಪ್ರಯಾಣಿಕರನ್ನು ಕರೆದೊಯ್ಯಲು ಯಾವುದೇ ವ್ಯವಸ್ಥೆ ಇಲ್ಲದ ಕಾರಣ ಪರದಾಡುವ ಸ್ಥಿತಿ ಕಂಡು ಬಂದಿತು.

ಇದನ್ನೂ ಓದಿ: Exit Polls: ಈಗಲೂ ನನ್ನ ಭವಿಷ್ಯವೇ ನಿಜ ಆಗಲಿದೆ… ಡಿ.ಕೆ.ಶಿವಕುಮಾರ್‌

Advertisement

Udayavani is now on Telegram. Click here to join our channel and stay updated with the latest news.

Next