ತೆಕ್ಕಟ್ಟೆ: ಇಲ್ಲಿನ ರಾ.ಹೆ. 66ರಲ್ಲಿ ಕುವೆಂಪು ಶತಮಾನೋತ್ಸವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎದುರು ಮಾರುತಿ ಸ್ವಿಫ್ಟ್ ಕಾರು ಟಿವಿಎಸ್ ಜುಪಿಟರ್ ವಾಹನಕ್ಕೆ ಢಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ಮೇ 21ರಂದು ಬೆಳಗ್ಗೆ 11. 45ರ ಸುಮಾರಿಗೆ ಸಂಭವಿಸಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಿಂದ ದರ್ಶನ ಮುಗಿಸಿ ಕೇರಳದ ಕಡೆಗೆ ಅತೀ ವೇಗದಿಂದ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ನೇರವಾಗಿ ಬಂದು ರಸ್ತೆಯ ಬದಿಯಲ್ಲಿ ಸಾಗುತ್ತಿದ್ದ ಟಿವಿಎಸ್ ಜುಪಿಟರ್ ವಾಹನಕ್ಕೆ ಢಿಕ್ಕಿ ಹೊಡೆದು ಅನಂತರ ರಸ್ತೆಯ ಬದಿಯಲ್ಲಿರುವ ಮರಕ್ಕೆ ಢಿಕ್ಕಿ ಹೊಡೆದಿದೆ.
ಸ್ಕೂಟಿ ಸವಾರ ಅಮರ್ ಶೆಟ್ಟಿ (35) ಅವರ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತತ್‌ಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿವಿಎಸ್ ಜುಪಿಟರ್ ವಾಹನ ನುಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಮಾರುತಿ ಸ್ವಿಫ್ಟ್ ಕಾರು ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷéವೇ ಈ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. ಕೋಟ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.