Advertisement

ಬೆಳ್ಳಂಬೆಳಗ್ಗೆ ಶಿರಾ ಬಳಿ ಭೀಕರ ರಸ್ತೆ ಅಪಘಾತ : 9 ಜನರ ದುರ್ಮರಣ, ಹಲವರ ಸ್ಥಿತಿ ಗಂಭೀರ

09:29 AM Aug 25, 2022 | Team Udayavani |

ತುಮಕೂರು : ಜಿಲ್ಲೆಯ ಶಿರಾ ತಾಲೂಕು ಕಳ್ಳಂಬೆಳ್ಳ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ 9 ಜನರು ಮೃತಟ್ಟು ಹಲವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

Advertisement

ಗುರುವಾರ ಮುಂಜಾನೆ ಕ್ರೂಸರ್ ಗೆ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಒಂಬತ್ತು ಜನ ಸಾವನ್ನಪ್ಪಿದ್ದಾರೆ.

ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಕಳ್ಳಂಬೆಳ್ಳ ಬಳಿಯ ಬಾಳೇನಹಳ್ಳಿ ಬಳಿ ಈ ಭೀಕರ ಘಟನೆ ನಡೆದಿದೆ.

ರಾಯಚೂರು ಮತ್ತು ಮಾನ್ವಿ ಮೂಲದ ಜನರು ಕೂಲಿ ಅರಸಿ ಕ್ರೂಜರ್ ವಾಹನದಲ್ಲಿ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದರು ಈ ವೇಳೆ
ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಂಬತ್ತು ಜನ ಸಾವನ್ನಪ್ಪಿದ್ದು,ತೀವ್ರ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯಲ್ಲಿ ಮೃತಪಟ್ಟ ಅವರಲ್ಲಿ ನಾಲ್ಕು ಗಂಡಸರು ಒಂದು ಮಗು ಹಾಗೂ ನಾಲ್ವರು ಹೆಂಗಸರು ಸೇರಿದ್ದಾರೆ.

Advertisement

ಇನ್ನು ಘಟನೆ ನಡೆದ ಕೂಡಲೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅಡಿಷನಲ್ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.
ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮತ್ತು ಜಿಲ್ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಷಹಪುರ್ ವಾಡ್ ತುಮಕೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಮುಗಿಲು ಮುಟ್ಟಿದ ಆಕ್ರಂದನ : ಅಪಘಾತ ಸ್ಥಳದಲ್ಲಿ ಮೃತಪಟ್ಟಿರುವ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 

Advertisement

Udayavani is now on Telegram. Click here to join our channel and stay updated with the latest news.

Next