Advertisement

Road Mishap: ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

04:37 PM Jan 10, 2024 | Team Udayavani |

ವಿಜಯಪುರ: ಬೈಕ್ ಗೆ ಡಿಕ್ಕಿಯಾಗಿ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿದ್ದು, ಬಸ್ ಪ್ರಯಾಣಿಕರು ಅಪಾಯದಿಂದ ಪಾರಾದರೂ ಬೈಕ್ ಸವಾರ ಮಾತ್ರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಿಂದಗಿ ರಸ್ತೆಯಲ್ಲಿ ಸಂಭವಿಸಿದೆ.

Advertisement

ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿ-52 ರಲ್ಲಿ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಅಪಘಾತ ಸಂಭವಿಸಿದ್ದು, ಮೋರಟಗಿ ಕಡೆಯಿಂದ ಸಿಂದಗಿ ಕಡೆ ಹೊರಟಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಕೆಎ28 ಎಫ್ 2469 ಸಂಖ್ಯೆಯ ಬಸ್ ಗೆ ಎದುರಿನಿಂದ ಬಂದ್ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ.

ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಬಸ್ಸಿನ ಅಡಿಯಲ್ಲಿ ಸಿಲುಕಿದ ಪರಿಣಾಮ ಪೆಟ್ರೋಲ್ ಸೋರಿಕೆಯಾಗಿ ಏಕಾಏಕಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ.

ಬಸ್ ಗೆ ಬೆಂಕಿ‌ ಹೊತ್ತಿಕೊಳ್ಳುತ್ತಲೇ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ ಪ್ರಯಾಣಿಕರು, ಕೂಡಲೇ ಬಸ್ ನಿಂದ ಕೆಳಗೆ ಇಳಿದ ಕಾರಣ ಸಂಭವನೀಯ ಭಾರಿ ದುರಂತ ತಪ್ಪಿದೆ.

Advertisement

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸೇವೆಯ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರೂ, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಸಿಂದಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತ ಬೈಕ್ ಸವಾರ ವಿಳಾಸ ಪತ್ತೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: INDvsAFG; ಭಾರತದ ವಿರುದ್ಧದ ಸರಣಿಯಿಂದ ಹೊರಬಿದ್ದ ಸ್ಪಿನ್ನರ್ ರಶೀದ್ ಖಾನ್

Advertisement

Udayavani is now on Telegram. Click here to join our channel and stay updated with the latest news.

Next