Advertisement

Road mishap: ನಿಟ್ಟೆ ಸಮೀಪ ಖಾಸಗಿ ಬಸ್- ಜೀಪು ಢಿಕ್ಕಿ; ಓರ್ವ ಮೃತ್ಯು, ಹಲವರಿಗೆ ಗಾಯ

05:19 PM Dec 10, 2023 | Team Udayavani |

ಕಾರ್ಕಳ: ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಮಂಜಲ್ಪಾಕೆ  ಎಂಬಲ್ಲಿ  ಖಾಸಗಿ ಬಸ್‌ ಹಾಗೂ ಜೀಪು ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಭಾನುವಾರ(ಡಿ.10 ರಂದು) ನಡೆದಿದೆ.

Advertisement

ಓವರ್ ಟೇಕ್ ಮಾಡುವ ಸಂದರ್ಭ ಘಟನೆ ಸಂಭವಿಸಿದ್ದು,  ಜೀಪಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡಿದ್ದ ಓರ್ವ ಗಾಯಾಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಜೀಪಿನಲ್ಲಿದ್ದವರು ಸ್ಥಳಿಯ ದೈವದ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಸ್ಸಾಗುತಿದ್ದರು ಎನ್ನಲಾಗಿದೆ.

ಗಾಯಾಳುಗಳನ್ನು  108 ಆಂಬುಲೆನ್ಸ್‌ ನಲ್ಲಿ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ‌ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next