Advertisement

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

06:08 PM Apr 30, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಬೈಕ್ -ಪಿಕ್ ಅಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ತಾಲೂಕಿನ ಕುರುಬರಹುಂಡಿ ಸಮೀಪ ಮಂಗಳವಾರ ಸಂಜೆ ನಡೆದಿದೆ.

Advertisement

ಕುರುಬರಹುಂಡಿ ಗ್ರಾಮದ ಬಸಪ್ಪ(32) ಮೃತ ಬೈಕ್ ಸವಾರ.

ಈತ ಬೊಮ್ಮನಹಳ್ಳಿ ಕುರುಬರಹುಂಡಿ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬಾಳೆ ತುಂಬಿಕೊಂಡು ಬರುತ್ತಿದ್ದ ಗೂಡ್ಸ್ ವಾಹನ ನಡುವೆ ಡಿಕ್ಕಿಯಾಗಿದೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಘಟನೆಯಲ್ಲಿ ಬೈಕ್ ಸವಾರನ ತಲೆಗೆ ತೀವ್ರಪೆಟ್ಟು ಬಿದ್ದು ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತೆರಕಣಾಂಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಹಿತಿ ಅರಿತ ತೆರಕಣಾಂಬಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತ ದೇಹವನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಘಟನೆ ಸಂಬಂಧ ತೆರಕಣಾಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next