Advertisement

Road Mishap ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 30ಕ್ಕೂ ಹೆಚ್ಚು ಮಂದಿಗೆ ಗಾಯ

09:25 PM Oct 24, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ವೆಸ್ಟ್ ಬೆಂಗಾಲ್ ಮೂಲದ ಬಸ್ಸೊಂದು‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 30ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ‌ ಬಂಡೀಪುರ ಅಭಯಾರಣ್ಯದ ಮೇಲುಕಾಮನಹಳ್ಳಿ ಬಳಿಯ ಹೆದ್ದಾರಿ ರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ‌.

Advertisement

ಬಂಡೀಪುರ ಮಾರ್ಗವಾಗಿ 66 ಮಂದಿ ಪ್ರಯಾಣಿಕರನ್ನು ತುಂಬಿಕೊಂಡು ಊಟಿಗೆ ತೆರಳುತ್ತಿದ್ದ ವೆಸ್ಟ್ ಬೆಂಗಾಲ್ ಮೂಲದ ಬಸ್ ಹೆದ್ದಾರಿ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ 35 ಮಂದಿ ಪ್ರಯಾಣಿಕರಿಗೆ ಕೈ ಕಾಲು, ತಲೆಗೆ ಪೆಟ್ಟಾಗಿದೆ.

ಘಟನೆ ಮಾಹಿತಿ ಅರಿತ ಸ್ಥಳೀಯರು ಅಂಬುಲೆನ್ಸ್ ಗೆ ಮಾಹಿತಿ ನೀಡಿ ಕೂಡಲೇ ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದರಲ್ಲಿ 19 ಮಂದಿಯನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಪ್ರಯಾಣಿಕರಿಗೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಇನ್ನೂ ಪೊಲೀಸ್ ವೃತ್ತ ನಿರೀಕ್ಷಕ ಪರಶಿವಮೂರ್ತಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಭೇಟಿ: ಅಪಘಾತದ ಮಾಹಿತಿ ಅರಿತ ಜಿಲ್ಲಾಧಿಕಾರಿ ಶಿಲ್ಪಾನಾಗ್ ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ, ಸೂಕ್ತ ರೀತಿಯಲ್ಲಿ ಚಿಕಿತ್ಸೆ ಕೊಡಿಸುವಂತೆ ಆಸ್ಪತ್ರೆ ವೈದ್ಯಾಧಿಕಾರಿ ಮಂಜುನಾಥ್ ಗೆ ಸೂಚನೆ ನೀಡಿದ್ದಾರೆ. ಈ ವೇಳೆ ತಹಸೀಲ್ದಾರ್ ಟಿ.ರಮೇಶ್ ಬಾಬು ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next