Advertisement

ಕಾರು ಅಪಘಾತ: ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ್ ಗೆ ಗಾಯ

10:08 AM Apr 15, 2023 | Team Udayavani |

ಕಲಬುರಗಿ: ನೆರೆಯ ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅವರ ಕಾರು ಅಪಘಾತಕ್ಕೀಡಾಗಿದೆ.

Advertisement

ಕಾರಿನಲ್ಲಿದ್ದ ಚಿಂಚನಸೂರ್ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದರು.

ತಡರಾತ್ರಿ ಹನ್ನೆರಡುವರೆ ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಎಲುಬು ಹಾಗೂ ನರಗಳಿಗೆ ಏಟು ಬಿದ್ದಿದೆ. ಆಸ್ಪತ್ರೆಯ ತಜ್ಞ ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಾಬುರಾವ್‌ ಅವರ ಮನೆ ಕಲಬುರಗಿಯ ಶಾಂತಿನಗರದಲ್ಲಿದೆ. ಕ್ಷೇತ್ರದಲ್ಲಿ ಪ್ರಚಾರ ಮುಗಿಸಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ ಎಂದು ಗೊತ್ತಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next