Advertisement

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

09:42 PM May 06, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಹೊರವಲಯದ ಹೆದ್ದಾರಿಯ ಶ್ರೀರಾಮದೇವರ ಗುಡ್ಡದ ಬಳಿ ಸೋಮವಾರ ರಾತ್ರಿ ನಡೆದಿದೆ.

Advertisement

ಪಟ್ಟಣದ ಕುರಬಗೇರಿಯ ವಿಶ್ವ (35)ಮೃತ ದುರ್ದೈವಿ.

ಈತ ಕೇರಳ ರಸ್ತೆ ಮಾರ್ಗವಾಗಿ ಪಟ್ಟಣಕ್ಕೆ ‌ಬೈಕ್ ನಲ್ಲಿ ಬರುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.ಘಟನೆಯಲ್ಲಿ ಬೈಕ್ ಸವಾರನ‌ ಕಾಲು ಮುರಿದುಹೋಗಿ ತಲೆಗೆ ತೀವ್ರ ಪೆಟ್ಟು ಬಿದ್ದ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.ಇನ್ನೂ ಡಿಕ್ಕಿ ಹೊಡೆದು ಪರಾರಿಯಾದ ವಾಹನ ಪತ್ತೆಗೆ ಸಿ.ಸಿ ಕ್ಯಾಮರ ಪರಿಶೀಲನೆಯಲ್ಲಿ ಪೊಲೀಸರು ತೊಡಗಿದ್ದಾರೆ.

ಈ‌ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next