Advertisement
ಅತೀ ವೇಗವಾಗಿ ಬರುವಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡ ಪರಿಣಾಮ ಎಂಜಿನಿಯರ್ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Related Articles
Advertisement
ಇದನ್ನೂ ಓದಿ:ಕಾಫಿರ್ ರನ್ನು ಕೊಂದರೆ ಸ್ವರ್ಗ ಪ್ರಾಪ್ತಿ?: ಮುಸ್ಲಿಂ ವಿದ್ವಾಂಸರಿಗೆ ಸಿ.ಟಿ.ರವಿ ಪ್ರಶ್ನೆ
ಟಾಟಾ ಏಸ್ ಚಾಲಕ ಸಾವು:ಮತ್ತೊಂದು ಪ್ರಕರಣದಲ್ಲಿ ಟಾಟಾ ಏಸ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡು ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗನಾಥಪುರದ ನಿವಾಸಿ ಮಾರಪ್ಪ(28) ಮೃತ ಚಾಲಕ. ಭಾನುವಾರ ಮಧ್ಯರಾತ್ರಿ 2.15ರ ಸುಮಾರಿಗೆ ಹೊಸೂರು ರಸ್ತೆಯ ವೀರಸಂದ್ರ ಜಂಕ್ಷನ್‌ನಲ್ಲಿ ವೇಗವಾಗಿ ಟಾಟಾ ಏಸ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ಈ ವೇಳೆ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ವಾಹನ ನಾಲ್ಕೈದು ಪಲ್ಟಿಯಾಗಿದೆ. ಪರಿಣಾಮ ಮಾರಪ್ಪನಿಗೆ ಗಂಭೀರ ಗಾಯವಾಗಿದೆ. ಸ್ಥಳೀಯರು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.