Advertisement
ಬ್ಯಾಟರಾಯನಪುರ ಜಂಕ್ಷನ್ ಬಳಿ ವೇಗವಾಗಿ ಬಂದ ಕಾರೊಂದು ಬುಲೆಟ್ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸೋದರ ಸಂಬಂಧಿ ಯುವಕರು ಮೃತಪಟ್ಟಿದ್ದಾರೆ. ಅಮೃತಹಳ್ಳಿ ನಿವಾಸಿ ಕಿರಣ್ (22) ಮತ್ತು ಆತನ ಸೋದರ ಸಂಬಂಧಿ ಯತೀಶ್ (23) ಮೃತ ಯುವಕರು. ಅವರಿಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ.
ಮತ್ತೊಂದು ಪ್ರಕರಣದಲ್ಲಿ ಮಾನ್ಯತಾ ಟೆಕ್ ಪಾರ್ಕ್ ಬಳಿಯ ರಿಂಗ್ ರಸ್ತೆಯಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಕೊಂಡು ಬೈಕ್ ಸವಾರ ಬಾಗಲಗುಂಟೆ ನಿವಾಸಿ ರಘುವೀರ್ (24) ಮೃತಪಟ್ಟಿದ್ದಾನೆ. ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ರಘುವೀರ್, ಹೆಗಡೆನಗರದಲ್ಲಿರುವ ಪರಿಚಯಸ್ಥರ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಮನೆಗೆ ಬರುತ್ತಿರುವಾಗ ಹೆಬ್ಟಾಳ ರಿಂಗ್ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದ್ದಾನೆ. ಅವರು ಹೆಲ್ಮೆಟ್ ಧರಿಸಿರಲಿಲ್ಲ. ಎರಡು ದುರ್ಘಟನೆಗಳ ಸಂಬಂಧ ಹೆಬ್ಟಾಳ ಸಂಚಾರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.