ದಾವಣಗೆರೆ: ದಾವಣಗೆರೆ ತಾಲೂಕಿನ ಕೊಗ್ಗನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು 9 ಜನರಿಗೆ ಗಂಭೀರ ಗಾಯಗಳಾಗಿವೆ.
ಸರಣಿ ಅಪಘಾತದಲ್ಲಿ ಟಾಟಾ ಎಸ್ ನಲ್ಲಿದ್ದ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಗುತ್ತಲ ಗ್ರಾಮದ ಹನುಮಂತಪ್ಪ (58) ಎಂಬುವರು ಸಾವನ್ನಪ್ಪಿದ್ದಾರೆ.
ಕಾರು, ಮಿನಿ ಬಸ್, ಟಾಟಾ ಏಸ್ ನಡುವೆ ಸರಣಿ ಅಪಘಾತವಾಗಿದೆ.
ರೇಷ್ಮೆ ಮಾರಾಟ ಮಾಡಲು ರಾಮನಗರಕ್ಕೆ ಹೊರಟಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
Related Articles
ಗಾಯಗೊಂಡ 9 ಜನರ ಪೈಕಿ ಐವರ ಕಾಲು ಮುರಿದಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.