Advertisement

Kumta ಬೈಕ್ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

07:39 PM Aug 16, 2023 | Team Udayavani |

ಕುಮಟಾ: ನಿಯಂತ್ರಣ ತಪ್ಪಿ ಬೈಕ್ ಸೇತುವೆಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ದೀವಗಿಯ ಅಘನಾಶಿನಿ ಸೇತುವೆ ಬಳಿ ನಡೆದಿದೆ.

Advertisement

ನಿತ್ಯಾ ರಮೇಶ ನಾಯ್ಕ (28) ಮೃತ ಯುವಕನಾಗಿದ್ದು, ಈತ ಸಮೀಪದ ತಂಡ್ರಕುಳಿಯಲ್ಲಿ ಗ್ಯಾರೇಜ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಕುಮಟಾದಿಂದ ತಂಡ್ರಕುಳಿಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸೇತುವೆಯ ತಡೆಗೊಡೆಗೆ ಬೈಕ್ ಡಿಕ್ಕಿಯಾಗಿದೆ.

ಈ ವೇಳೆ ಅಪಘಾತದಲ್ಲಿ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ಕುಮಟಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next