Advertisement

Road mishap: ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ: 7 ಕಾರುಗಳು ಜಖಂ

10:56 AM Dec 19, 2023 | Team Udayavani |

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಸರಣಿ ಅಪಘಾತದಲ್ಲಿ ಏಳು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Advertisement

ವಿಮಾನ ನಿಲ್ದಾಣದ ರಸ್ತೆಯ ದೊಡ್ಡಜಾಲ ಮೇಲು ಸೇತುವೆ ಬಳಿ ಸೋಮವಾರ ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದ್ದು, ವಿಮಾನ ನಿಲ್ದಾಣದ ಕಡೆಯಿಂದ ನಗರದತ್ತ ಅತೀವೇಗವಾಗಿ ಹೋಗುವಾಗ ಮಾರ್ಗ ಮಧ್ಯೆ ದೊಡ್ಡಜಾಲ ಮೇಲ್ಸೇಸೇತುವೆ ಬಳಿ ನಿಯಂತ್ರಣ ತಪ್ಪಿ ಏಳು ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಕೊಂಡಿವೆ. ಅದರಿಂದ 7 ಕಾರುಗಳು ಜಖಂಗೊಂಡಿದ್ದು, ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಹೇಳಿದರು.

ವಾಹನ ಸಂಚಾರ ದಟ್ಟಣೆ: ಈ ಸರಣಿ ಅಪಘಾತದಿಂದ ಕೆಲ ಕಾಲ ವಿಮಾನ ನಿಲ್ದಾಣ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು. ವಿಮಾನ ನಿಲ್ದಾಣ ಕಡೆಯಿಂದ ನಗರದತ್ತ ಬರುತ್ತಿದ್ದ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇನ್ನು ಸರಣಿ ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಚಿಕ್ಕಜಾಲ ಸಂಚಾರ ಠಾಣೆ ಪೊಲೀಸರು, ಜಖಂಗೊಂಡಿದ್ದ ಕಾರುಗಳನ್ನು ರಸ್ತೆಯಿಂದ ತೆರವುಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next