Advertisement

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

08:22 PM Dec 27, 2024 | Team Udayavani |

ವಿಜಯಪುರ(ದೇವನಹಳ್ಳಿ): ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದಾಗ ಆಯತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ಶುಕ್ರವಾರ (ಡಿ.27 ರಂದು) ಸಂಭವಿಸಿದೆ.

Advertisement

ಪಟ್ಟಣದ ನಿವಾಸಿಗಳಾದ ಮನೋಜ್‌ (19) ಮತ್ತು ಅರ್ಬಾಜ್‌ (19) ಮೃತರು. ಬೈಪಾಸ್‌ ರಸ್ತೆಯಲ್ಲಿ ಬೆಳಗ್ಗೆ ಮಳೆ ನಡುವೆಯೇ ವ್ಹೀಲಿಂಗ್‌ ಮಾಡುತ್ತಿದ್ದಾಗ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದ್ದು, ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.

ಪಟ್ಟಣದಲ್ಲಿ ಜನಸಂದಣಿ ಹೆಚ್ಚಾಗಿರುವ ರಸ್ತೆಗಳು ಹಾಗೂ ಬೈಪಾಸ್‌ ರಸ್ತೆಯಲ್ಲಿ ದಿನನಿತ್ಯ ವ್ಹೀಲಿಂಗ್‌ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಹಲವು ಬಾರಿ ಪೊಲೀಸರಿಗೆ ಮನವಿ ಮಾಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಕನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next