Advertisement

Road Mishap: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಅಪ್ಪಚ್ಚಿಯಾದರೂ ಇಬ್ಬರು ಪಾರು!

11:06 AM Oct 16, 2023 | Team Udayavani |

ದೇವನಹಳ್ಳಿ:  ತಾಲೂಕಿನ ವಿಶ್ವನಾಥಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಇಬ್ಬರು ಪವಾಡ ರೀತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಹೊಸಕೋಟೆ-ದೊಡ್ಡಬಳ್ಳಾಪುರ ಮಾರ್ಗವಾಗಿ ಅತೀ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿವೈಡರ್‌ಗೆ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಕಿತ್ತ ಹೋಗಿದ್ದು, ಪಲ್ಟಿಯಾಗಿದೆ.

ಕಾರು ಅಪ್ಪಚ್ಚಿಯಾದಂತೆ ಕಾಣುತ್ತಿದೆ. ಆದರೂ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ವಿಶ್ವನಾಥಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next