ಬೀದರ್: ಬಸ್ – ಆಟೋ ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಅತಿವಾಳ ಕ್ರಾಸ್ ಬಳಿ ಭಾನುವಾರ (ಆ.11ರಂದು) ಮಧ್ಯಾಹ್ನ ನಡೆದಿದೆ.
ಬೀದರ್- ಭಾಲ್ಕಿ ಮುಖ್ಯ ರಸ್ತೆಯ ಹೆದ್ದಾರಿ 50 ರಲ್ಲಿ ಅಪಘಾತ. ಮಹಾರಾಷ್ಟ್ರ ಬಸ್ ಮತ್ತು ಆಟೋ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಅನಿತಾಬಾಯಿ(45) ಮತ್ತು ಆಕೆಯ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರು ಮೂವರು ಗಂಭೀರವಾಗಿ ಗಾಯಗೊಂಡಿದ್ದು,ಅವರು ಹೋನ್ನಕೇರಿ ತಾಂಡದ ನಿವಾಸಿಗಳೆಂದು ಗುರುತಿಸಲಾಗಿದೆ.
ಬಸ್ ಬೀದರ್ನಿಂದ ಮಹಾರಾಷ್ಟ್ರದ ಲಾತೂರ್ಗೆ ಹೋಗುತ್ತಿತ್ತು. ಈ ವೇಳೆ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಜನವಾಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದ ಬಳಿಕ ಘಟನಾ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಬೀದರ್- ಭಾಲ್ಕಿ ಮುಖ್ಯ ರಸ್ತೆ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ. ಅತ್ತ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಜನವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.