Advertisement
ಪಾರೆಂಕಿ ಗ್ರಾಮದ ಅರ್ತಿಲಾ ಮನೆಯ ರಂಝಿನ್ ಶಾಲಾ ರಜೆಯ ಹಿನ್ನೆಲೆ ಸಂಬಂಧಿಕರ ಮನೆಗೆ ಬಂದಿದ್ದು, ಬುಧವಾರ ಬೆಳಗ್ಗೆ ಅಂಗಡಿಗೆ ಹೋಗಿ ಮರಳಿ ರಸ್ತೆ ದಾಟುವಾಗ ಲಾೖಲ ಜಂಕ್ಷನ್ ಬಳಿ ಉಜಿರೆಯಿಂದ ಬಂದ ಪಿಕಪ್ ಢಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾನೆ.
Related Articles
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಶಾಂತಿಗುಡ್ಡೆ ಎಂಬಲ್ಲಿ ವ್ಯಕ್ತಿಯೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣ ನಡೆದಿದೆ. ಈ ಸಂಬಂಧ ಮೋಹನ ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Advertisement
ಅವರು ಅ. 18ರಂದು ಬೆಳಗ್ಗೆ ಮನೆಯಿಂದ ಕೂಲಿ ಕೆಲಸಕ್ಕೆಂದು ಹೊರಟು ಶಾಂತಿಗುಡ್ಡೆ ಎಂಬಲ್ಲಿ ಒಬಯ್ಯ ಪೂಜಾರಿ ಎಂಬವರೊಂದಿಗೆ ಮಾತನಾಡುತ್ತಿದ್ದಾಗ, ಸದಾಶಿವ ಯಾನೆ ಮೇದಪ್ಪ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮರದ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ಮೋಹನ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.