Advertisement

Road Mishap;ಮೂಳೂರು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ ಢಿಕ್ಕಿ : ಸ್ಥಳದಲ್ಲೇ ಸಾವು

09:42 PM Jul 26, 2023 | Team Udayavani |

ಕಾಪು‌ : ರಾಷ್ಟ್ರೀಯ ಹೆದ್ದಾರಿ 66ರ‌ ಮೂಳೂರು ಸಿಎಸ್ಐ ಚರ್ಚ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವರಿಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

Advertisement

ಮೃತ ವ್ಯಕ್ತಿಯನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೂಳೂರು ನಿವಾಸಿಯಾಗಿರುವ ಚಂದ್ರಶೇಖರ್ ಪ್ರಸ್ತುತ ಸುರತ್ಕಲ್ ನಲ್ಲಿ ವಾಸವಿದ್ದು ಮಾರಿಪೂಜೆ ಪ್ರಯುಕ್ತ ತನ್ನ ಮೂಲ ಮನೆಗೆ ಆಗಮಿಸಿದ್ದರು‌ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next