Advertisement

Udupi; ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರ ಗಂಭೀರ

04:17 PM Sep 08, 2024 | Team Udayavani |

ಉಡುಪಿ: ನಗರದ ಅಂಬಾಗಿಲಿನ ಎಲ್.ವಿ.ಟಿ ಬಳಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ರವಿವಾರ (ಸೆ.08) ನಡೆದಿದೆ.

Advertisement

ಸಂತೆಕಟ್ಟೆಯಿಂದ ಉಡುಪಿಯತ್ತ ಅತಿ ವೇಗವಾಗಿ ಬರುತ್ತಿದ್ದ ಸ್ವಿಫ್ಟ್‌ ಕಾರು ಮತ್ತು ಒಳರಸ್ತೆಯಿಂದ ಹೆದ್ದಾರಿಯತ್ತ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ರಸ್ತೆಗೆ ಉರುಳಿಬಿದಿದ್ದು, ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ.

ದ್ವಿಚಕ್ರ ವಾಹನದಲ್ಲಿದ್ದ ಮತ್ತೊಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

Advertisement

ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next