Advertisement

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

08:23 PM Jul 18, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಖಾಸಗಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟಿದ್ದು, 10 ಮಂದಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಬಲಚವಾಡಿ ಸಮೀಪ ನಡೆದಿದೆ.

Advertisement

ತಾಲೂಕಿನ ಬಲಚವಾಡಿ ಗ್ರಾಮದ ಮಹೇಶ್(60) ಮೃತ ವ್ಯಕ್ತಿ.

ಚಾಲಕ ನಿಂಗರಾಜು ತಲೆ ಹಾಗೂ ಕೈಕಾಲಿಗೆ ತೀವ್ರ ಪೆಟ್ಟಾಗಿದ್ದು, ಉಳಿದ 9 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ತೆರಕಣಾಂಬಿ ಠಾಣೆ ಪೊಲೀಸರು ದೌಡಾಯಿಸಿ ತೀವ್ರ ಗಾಯವಾಗಿದ್ದ ಮಹೇಶ್ ಅವರನ್ನು ಮೈಸೂರಿನ ಆಸ್ಪತ್ರೆಗೆ ರವಾಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹೇಶ್ ಸಾವನ್ನಪ್ಪಿದ್ದಾರೆ.

ಉಳಿದ ಗಾಯಾಳುಗಳಿಗೆ ತೆರಕಣಾಂಬಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Advertisement

ಸ್ಥಳಕ್ಕೆ ತೆರಕಣಾಂಬಿ ಠಾಣೆ ಸಬ್ ಇನ್ಸ್ ಪೆಕ್ಟರ್ ಈಶ್ವರ್ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ವನರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಬಸ್ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಇನ್ನೂ ಘಟನೆ ಸಂಬಂಧ ಎರಡು ವಾಹನಗಳನ್ನು ವಶಕ್ಕೆ ಪಡೆದ ತೆರಕಣಾಂಬಿ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next