Advertisement

Road Mishap ಶಿರಾಡಿ: ಕೆಎಸ್ಸಾರ್ಟಿಸಿ – ಕಾರು ಢಿಕ್ಕಿ; ಗಾಯ

11:24 PM Jul 07, 2024 | Team Udayavani |

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಬೆಂಗಳೂರು ನಿವಾಸಿ ಹರ್ಷಾ (49) ಗಾಯಗೊಂಡಿರುವ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಬರ್ಚಿನಹಳ್ಳದಲ್ಲಿ ರವಿವಾರ ಸಂಭವಿಸಿದೆ.

Advertisement

ಅವರು ತನ್ನ ಆಲ್ಟೋ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಗುಂಡ್ಯ ಸಮೀಪ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನ ನಡುವೆ ಢಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಹರ್ಷಾ ಅವರನ್ನು ನೆಲ್ಯಾಡಿಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next