Advertisement

Road Mishap ತೆಕ್ಕಟ್ಟೆ: ಕಾರು ಢಿಕ್ಕಿಯಾಗಿ ಸ್ಕೂಟರ್‌ ಸವಾರ ಸಾವು

11:45 PM Jan 02, 2024 | Team Udayavani |

ತೆಕ್ಕಟ್ಟೆ: ಕುಂಭಾಶಿ ಸಮೀಪ ಸ್ಕೂಟರೊಂದಕ್ಕೆ ಅತೀ ವೇಗದಿಂದ ಬಂದ ಕಾರು ಢಿಕ್ಕಿಯಾಗಿ ಸವಾರ ಸಾವಿಗೀಡಾದ ಘಟನೆ ಜ. 2ರಂದು ಬೆಳಗ್ಗೆ ಸಂಭವಿಸಿದೆ.

Advertisement

ಮೃತರನ್ನು ಕೆನರಾ ಬ್ಯಾಂಕ್‌ನ ನಿವೃತ್ತ ಮ್ಯಾನೇಜರ್‌, ಸಮಾಜ ಸೇವಕ ಕೆ. ಪಾಂಡುರಂಗ ಭಟ್‌ (81) ಎಂದು ಗುರುತಿಸಲಾಗಿದೆ. ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿಯಾದ ಪರಿಣಾಮ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಯ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಅವರು ಮೃತಪಟ್ಟರು. ಅವರು ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ದಾನಿಯಾಗಿ ಹಲವು ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸುತ್ತಿದ್ದ ಅವರು ಕೋಟೇಶ್ವರ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನದ ಶ್ರೀರಾಮ ಸೇವಾ ಸಂಘದ ಪದಾಧಿಕಾರಿಯಾಗಿದ್ದರು.

ಉತ್ತಮ ಕಲಾವಿದರಾದ ಇವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next