Advertisement

Road Mishap ಉಪ್ಪುಂದ: ಕಾರು ಡಿಕ್ಕಿ: ಪಾದಚಾರಿ ಸಾವು

08:52 PM Dec 19, 2023 | Team Udayavani |

ಉಪ್ಪುಂದ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಾವುಂದ ಮಸ್ಕಿಯಲ್ಲಿ ಡಿ.18ರಂದು ನಡೆದಿದೆ.

Advertisement

ನಾವುಂದ ಗಣೇಶನಗರ ನಿವಾಸಿ ಗೋವಿಂದ ಖಾರ್ವಿ (70) ಮೃತ ಪಟ್ಟ ವ್ಯಕ್ತಿ.

ನಾವುಂದ ಬಳಿಯ ಮಸ್ಕಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ವೇಗದಿಂದ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಗೋವಿಂದ ಖಾರ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಂದೂರು ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಸ್ಥಳ ಮಹಜರು ನಡೆಸಿದರು. ಆಪ್ತರಕ್ಷಕ ಇಬ್ರಾಹಿಂ ಗಂಗೊಳ್ಳಿ ಅವರು ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next