Advertisement
ಜುಲೈ 12ರಂದು ಉದಯವಾಣಿಯಲ್ಲಿ “ಅಡ್ಡಾದಿಡ್ಡಿ ವಾಹನ ನಿಲುಗಡೆಗೆ ಟ್ರಾಫಿಕ್ ಜಾಮ್’ ಶೀರ್ಷಿಕೆಯಡಿ ಪೊಲೀಸರ ನಿರ್ಲಕ್ಷ್ಯದಿಂದ ಸಂಚಾರ ದಟ್ಟಣೆ ಬಗ್ಗೆ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.
Related Articles
Advertisement
ನಿಯಮ ಮೀರಿದರೆ ದಂಡ: ಪಟ್ಟಣದಲ್ಲಿ ಸಂಚಾರ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಕೇಳಿ ಬಂದ ದೂರಿನ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಪ್ರಾಯೋಗಿಕವಾಗಿ ಮೂರು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ದಿನಾಂಕ ನಿಗದಿಪಡಿಸುವುದರ ಜೊತೆಗೆ ನಿಯಮ ಮೀರಿ ವಾಹನ ಚಲಾಯಿಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಂಡು ಅನಿಯಮಿತ ವೇಗದಿಂದ ಚಲಿಸುವವರಿಗೆ, ಮೊಬೈಲ್ ಬಳಸಿ, ವಾಹನ ವಿಮೆ ಇಲ್ಲದವರಿಗೆ ಮತ್ತು ನೋ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವವರಿಗೆ ಒಂದು ಸಾವಿರ ರೂ ದಂಡ ವಿಧಿಸಲಾಗುತ್ತಿದೆ.
ಪೇದೆ ನೇಮಕ: ಈ ಮೂರು ರಸ್ತೆಗಳಿಗೆ ಏಕಮುಖ ಪಾರ್ಕಿಂಗ್ ವ್ಯವಸ್ಥೆ ಮಾಡುವುದರ ಜೊತೆಗೆ ಪೊಲೀಸ್ ಪೇದೆಗಳನ್ನು ನೇಮಿಸಿ ಎಲ್ಲೆಂದರಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸದಂತೆ ಎಚ್ಚರಿಸುವ ಕೆಲಸ ಮಾಡುವುದರ ಜತೆಗೆ ಅತಿಕ್ರಮವಾಗಿ ವಾಹನಗಳನ್ನು ನಿಲ್ಲಿಸಿದರೆ ವಾಹನಗಳಿಗೆ ಬೀಗ ಮುದ್ರೆಗಳನ್ನು ಹಾಕಿ ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ.
ಜನರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ರಸ್ತೆಗೆ ನೇಮಕಗೊಂಡಿರುವ ಪೇದೆಗಳು, ಮೋಟಾರು ಬೈಕಿನೊಂದಿಗೆ ಈ ಕಡೆಯಿಂದ ಆ ಕಡೆಗೆ ತಿರುಗಾಡಿಕೊಂಡು ಬೆಳಗ್ಗೆಯಿಂದ ರಾತ್ರಿಯವರೆಗೆ ವಾಹನ ದಟ್ಟಣೆಯನ್ನು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಇದಕ್ಕೆ ಎಲ್ಲರೂ ಸಹಕಾರ ನೀಡಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಜಾಗೃತಿ ಮೂಡಿಸುತ್ತಿದ್ದಾರೆ. ಈ ಕ್ರಮ ಎಷ್ಟು ದಿನಗಳವರೆಗೆ ಮುಂದುವರಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಪೊಲೀಸ್ ಇಲಾಖೆ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ. ಈ ವ್ಯವಸ್ಥೆ ನಿರಂತರವಾಗಿ ಮುಂದುವರಿದರೆ ಇಲಾಖೆ ಪ್ರಶಂಸೆಗೆ ಪಾತ್ರವಾಗಲಿದೆ. ಇದರಿಂದ ಸಾರ್ವಜನಿಕರು ಮತ್ತು ವಾಹನ ಸವಾರರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.-ಹೇಮಂತ್, ಮೊಬೈಲ್ ಅಂಗಡಿ ಮಾಲೀಕ ಪಟ್ಟಣದ ರಸ್ತೆಗಳಲ್ಲಿ ಸಂಜೆ ವೇಳೆಯಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾರರು ಸಂಚಾರ ಮಾಡಲು ತೊಂದರೆಯಾಗುವುದರ ಜತೆಗೆ ಮಕ್ಕಳು ಅಂಗಡಿ ಮುಂಗಟ್ಟುಗಳಿಗೆ ತೆರಳಲು ಹರಸಾಹಸಪಡಬೇಕಾಗಿತ್ತು. ಪೊಲೀಸ್ ಇಲಾಖೆಯ ಕ್ರಮದಿಂದ ಸಾರ್ವಜನಿಕರಿಗೆ ಅನುಕೂಲವಾಗಿದೆ. ಈ ಕಾರ್ಯ ನಿರಂತರವಾಗಿರಲಿ.
-ಕೆ.ಪರಮೇಶ್, ಪಟ್ಟಣದ ನಿವಾಸಿ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಅನುಕೂಲ ಕಲ್ಪಿಸಲು ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ಪ್ರತಿಯೊಬ್ಬರೂ ಅಗತ್ಯ ಸಹಕಾರ ನೀಡುವುದರ ಜತೆಗೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
-ಸುಬ್ರಹ್ಮಣ್ಯ, ಪೊಲೀಸ್ ಉಪನಿರೀಕ್ಷಕ ಪಟ್ಟಣದಲ್ಲಿ ಸಂಚಾರ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಕೇಳಿ ಬಂದ ದೂರಿನ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಪ್ರಾಯೋಗಿಕವಾಗಿ ಮೂರು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ದಿನಾಂಕ ನಿಗದಿಪಡಿಸಲಾಗಿದೆ. ಮುಂಬರುವ ದಿನಗಳಲ್ಲಿ ಈ ಕಾರ್ಯವನ್ನು ಎಲ್ಲಾ ರಸ್ತೆಗಳಿಗೂ ವಿಸ್ತರಿಸಲಾಗುವುದು.
-ಪಿ.ಕೆ.ರಾಜು, ಪೊಲೀಸ್ ವೃತ್ತ ನಿರೀಕ್ಷಕ