Advertisement
ರಸ್ತೆಯಲ್ಲಿ ನಿಂತಿದ್ದ ಕೆಸರು ನೀರನ್ನು ವಿದ್ಯಾರ್ಥಿಗಳಿಬ್ಬರು ಬಿಡಿಸಿ ಬಿಡುತ್ತಿರುವ ದೃಶ್ಯ ವೈರಲ್ ಆಗಿತ್ತು.
Related Articles
Advertisement
ಮಕ್ಕಳಿಗೆ ಹಾರೆ ನೀಡಿ ಕೆಲಸ ಮಾಡಿಸಿದ ಪೋಷಕರ ಮೇಲೆ, ರಸ್ತೆ ದುರಸ್ತಿ ಮಾಡಿಸದ ಪಂಚಾಯತ್ ಸದಸ್ಯ, ಅಧ್ಯಕ್ಷ ಮತ್ತು ಪಿಡಿಒ ಮೇಲೆ ಹಾಗೂ ಮಕ್ಕಳ ಬಗ್ಗೆ ನಿಗಾ ವಹಿಸದ ಶಾಲಾ ಶಿಕ್ಷಕರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿದರು. ಬಳಿಕ ಎಸ್‌ಐ ಆಂಜನೇಯ ರೆಡ್ಡಿ ಅವರು ಪ್ರಕರಣ ದಾಖಲಿಸುವ ಬದಲು ರಸ್ತೆ ದುರಸ್ತಿ ಮಾಡೋಣ ಎಂದಾಗ ನ್ಯಾಯಾಧೀಶರು ಒಪ್ಪಿ ದುರಸ್ತಿಯ ಬಳಿಕ ವರದಿ ನೀಡುವಂತೆ ಸೂಚಿಸಿದರು.
ಗ್ರಾ.ಪಂ. ಸ್ಪಂದನೆಮಕ್ಕಳು ರಸ್ತೆ ದುರಸ್ತಿಗೆ ಮುಂದಾದ ಬೆನ್ನಲ್ಲೇ ಬೆಳ್ಳಾರೆ ಗ್ರಾ.ಪಂ. ಸ್ಪಂದಿಸಿದೆ. ಈ ಬಗ್ಗೆ ಉದಯವಾಣಿ ಸೋಮವಾರ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಜಿ.ಪಂ. ಸಿಇಒ ತಾ.ಪಂ. ಇಒಗೆ ತತ್‌ಕ್ಷಣ ಸ್ಪಂದಿಸುವಂತೆ ಸೂಚನೆ ನೀಡಿದ್ದರು. ಇಒ ಭವಾನಿಶಂಕರ ಅವರು ಬೆಳ್ಳಾರೆ ಪಿಡಿಒ ಅವರನ್ನು ಸಂಪರ್ಕಿಸಿ ನಿರ್ದೆಶನ ನೀಡಿದ ಮೇರೆಗೆ ಪಿಡಿಒ ಅನುಷಾ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ತಾತ್ಕಾಲಿಕವಾಗಿ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ.