Advertisement

ಪಾರ್ಕಿಂಗ್‌ ಜಾಗ ಅನ್ಯ ಉದ್ದೇಶಕ್ಕೆ ಬಳಕೆಯಾದ್ರೆ ಕ್ರಮ

07:57 PM Nov 06, 2020 | Suhan S |

ದಾವಣಗೆರೆ: ಬೃಹತ್‌ ಕಟ್ಟಡಗಳ ನಿರ್ಮಾಣ ಸಂದರ್ಭದಲ್ಲಿ ಅನುಮತಿ ಪಡೆಯುವಾಗ ನಕ್ಷೆಯಲ್ಲಿ ಪಾರ್ಕಿಂಗ್‌ ಸ್ಥಳವೆಂದು ನಿಗದಿಪಡಿಸಿಕೊಂಡು ಬಳಿಕ ಈ ಸ್ಥಳವನ್ನು ಬೇರೆ ಉದ್ದೇಶಕ್ಕೆ ಬಳಕೆಯಾಗಿರುವುದು ಕಂಡು ಬಂದಲ್ಲಿ ಅಂತಹ ಸ್ಥಳವನ್ನು ಕೂಡಲೇ ತೆರವುಗೊಳಿಸಬೇಕು. ಕಟ್ಟಡ ಕೆಡವಿ ಹಾಕುವಅಗತ್ಯ ಬಿದ್ದಲ್ಲಿ ಪೊಲೀಸ್‌ ಭದ್ರತೆಯೊಂದಿಗೆ ತೆರವುಗೊಳಿಸಲು ಮುಂದಾಗಬೇಕು ಎಂದುಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷತಾ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಪ್ರತಿಷ್ಠಿತ ಅಂಗಡಿಗಳು, ಹೋಟೆಲ್‌ಗ‌ಳುಸೇರಿದಂತೆ ಬೃಹತ್‌ ಕಟ್ಟಡಗಳ ಎದುರು ಪಾರ್ಕಿಂಗ್‌ಗೆ ಸ್ಥಳವಿಲ್ಲದೆ ಜನರು ಎಲ್ಲೆಂದರಲ್ಲಿ ವಾಹನ ನಿಲುಗಡೆಮಾಡುತ್ತಿದ್ದಾರೆ. ಹೀಗಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದ್ದು, ಟ್ರಾಫಿಕ್‌ ಪೊಲೀಸರು ವಾಹನ ದಟ್ಟಣೆ ತೆರವುಗೊಳಿಸಲು ನಿತ್ಯವೂ ಪರದಾಡುತ್ತಿರುವುದು ಕಂಡುಬರುತ್ತಿದೆ ಎಂದರು.

ನಗರದ ಪಿ.ಜೆ. ಬಡಾವಣೆಯ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿರುತ್ತದೆ. ಆದರೆ ಇಲ್ಲಿನ ಕ್ಲಿನಿಕ್‌ ಹಾಗೂ ಲ್ಯಾಬ್‌ಗಳಲ್ಲಿನ ವೈದ್ಯರು, ಸಿಬ್ಬಂದಿಗಳು ತಮ್ಮ ಕಾರುಗಳನ್ನು ರಸ್ತೆಯಲ್ಲಿಯೇ ನಿಲ್ಲಿಸುತ್ತಿರುವುದರಿಂದ ಆಟೋ ಹಾಗೂ ವಾಹನ ಚಾಲಕರು, ಪಾದಚಾರಿಗಳಿಗೆತೀವ್ರ ತೊಂದರೆ ಆಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್‌ ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್‌ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಜಂಟಿಯಾಗಿ ನಗರದಲ್ಲಿ ಪರಿವೀಕ್ಷಣೆ ನಡೆಸಿ ಕ್ರಮ ಜರುಗಿಸಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಕುಕ್ಕವಾಡ, ಹದಡಿ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಕಬ್ಬು ಮತ್ತಿತರ ಕೃಷಿ ಉತ್ಪನ್ನ, ಸಾಮಗ್ರಿಗಳನ್ನು ಸಾಗಿಸುವ ಟ್ರ್ಯಾಕ್ಟರ್‌ಗಳು, ಎತ್ತಿನ ಗಾಡಿಗಳು ರಾತ್ರಿ ಕತ್ತಲಿನಲ್ಲಿ ಸಂಚರಿಸುತ್ತವೆ. ಇವು ಸಂಚರಿಸುವ ರಸ್ತೆಗಳಲ್ಲಿ ಅಪಘಾತ ಸಂಭವಿಸುವಸಾಧ್ಯತೆಗಳು ಹೆಚ್ಚಿರುತ್ತದೆ. ಜಿಲ್ಲೆಯಲ್ಲಿ ಈಗಾಗಲೆ ಇದೇ ಕಾರಣಗಳಿಗಾಗಿ ಹಲವು ಅಪಘಾತಗಳು ಸಂಭವಿಸಿಪ್ರಾಣಹಾನಿಯಾಗಿದೆ. ಇಂತಹ ದುರ್ಘ‌ಟನೆಗಳನ್ನು ತಪ್ಪಿಸುವುದು ಅಗತ್ಯವಾಗಿದ್ದು, ಇದಕ್ಕಾಗಿ ಟ್ರ್ಯಾಕ್ಟರ್‌, ಟ್ರೇಲರ್‌, ಎತ್ತಿನ ಗಾಡಿಗಳಿಗೆ ರಿಪ್ಲೆಕ್ಟರ್‌ ಸ್ಟಿಕ್ಕರ್‌ ಅಳವಡಿಕೆ ಅಥವಾ ರಿಪ್ಲೆಕ್ಟರ್‌ ಪೇಂಟ್‌ ಮಾಡಬೇಕು. ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಬೀದಿದೀಪ ವ್ಯವಸ್ಥೆ: ನಗರದ ವಿದ್ಯಾರ್ಥಿ ಭವನದಿಂದ ವಿದ್ಯಾನಗರ, ಹದಡಿ ರಸ್ತೆಯವರೆಗಿನ ಮಾರ್ಗದಲ್ಲಿಒಂದೇ ಒಂದು ಬೀದಿದೀಪ ಇಲ್ಲ, ರಾತ್ರಿ ವೇಳೆಸಾರ್ವಜನಿಕರು, ಮಹಿಳೆಯರು ಓಡಾಡುವುದು ತೀವ್ರ ಕಷ್ಟವಾಗುತ್ತಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಕೆಲವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಇದಕ್ಕೆ ಅಚ್ಚರಿ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಈಮಾರ್ಗ ಮಾತ್ರವಲ್ಲ, ನಗರದಲ್ಲಿ ಯಾವುದೇ ರಸ್ತೆಗಳಲ್ಲಿ ಬೀದಿದೀಪ ವ್ಯವಸ್ಥೆ ಇಲ್ಲದೇ ಇದ್ದಲ್ಲಿ ಕೂಡಲೇ ಬೀದಿದೀಪ ಅಳವಡಿಕೆ ಆಗಬೇಕು. ಇದಕ್ಕೆ ಕಾಲಮಿತಿ ನಿಗದಿಪಡಿಸಿಕೊಂಡು ಅನುಷ್ಠಾನಗೊಳಿಸಬೇಕು ಎಂದು ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್‌ ಕೆ. ಮಲ್ಲಾಡ, ಮಹಾನಗರಪಾಲಿಕೆ ಆಯಕ್ತ ವಿಶ್ವನಾಥ ಮುದಜ್ಜಿ, ಸ್ಮಾರ್ಟ್‌ ಸಿಟಿ ಯೋಜನೆ ಅಧಿಕಾರಿ ರವೀಂದ್ರ, ಜಿಲ್ಲಾ ಲಾರಿ ಮಾಲೀಕರ ಸಂಘದ ಅಧ್ಯಕ್ಷಸಯ್ಯದ್‌ ಸೈಫುಲ್ಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಟ್ರಕ್‌ ಟರ್ಮಿನಲ್‌ ನಿರ್ಮಾಣ :  ಜಿಲ್ಲೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕಾಗಿ ಈಗಾಗಲೇ ತಾಲೂಕಿನ ಹಳೇ ಬಾತಿ ಗ್ರಾಮ ವ್ಯಾಪ್ತಿಯಲ್ಲಿ 20.13 ಎಕರೆ ಜಾಗ ಗುರುತಿಸಲಾಗಿದೆ. ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಈ ಸ್ಥಳ ಸೂಕ್ತವಾಗಿರುವ ಬಗ್ಗೆ ಅಧಿಕಾರಿಗಳು ವರದಿ ನೀಡಿದಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಿಸಲು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next